ಬೆಂಗಳೂರು : 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿಯ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ದಿನಾಂಕ:23.03.2025 ರ ಭಾನುವಾರದಂದು ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ. ಸದರಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾದ ಕೀ ಉತ್ತರಗಳಿಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ https://kseab.karnataka.gov.in ಪರಿಷ್ಕೃತ ಉತ್ತರಗಳನ್ನು . ಮಂಡಲಿಯ ವೆಬ್ ಸೆಟ್ ನಲ್ಲಿ ಪರಿಶೀಲಿಸಿಬಹುದು.