ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ಪ್ರಕರಣದ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಬಳಿಕ ಆದೇಶ ಹೊರಡಿಸಿದ್ದು ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾ.ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ನನ್ನ ಮೇಲೆ ಅತ್ಯಾಚಾರ ಎಸಿಗಿದ್ದಾರೆ ಎಂದು ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ಮೂಲದ ಮಹಿಳೆ ಒಬ್ಬರು ರಾಮನಗರದ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ.