ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ವಾಹನವು ಕಮರಿಗೆ ಬಿದ್ದ ಪರಿಣಾಮ ಹುತಾತ್ಮರಾದ ಸೈನಿಕರ ಸಂಖ್ಯೆ ಮೂವರಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಇನ್ನು ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ.ಪಯೆನ್ ಬಳಿ ಸೇನಾ ವಾಹನವೊಂದು ರಸ್ತೆಯಿಂದ ಜಾರಿ ಕಮರಿಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.
ಇಬ್ಬರು ಸೈನಿಕರು ಸ್ಥಳದಲ್ಲಿಯೇ ಉಳಿರುಚೆಲ್ಲಿದ್ದು, ಗಾಯಗೊಂಡ ಸ್ಥಿತಿಯಲ್ಲಿದ್ದ ಇನ್ನು ಮೂವರನ್ನ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಮಸ್ರತ್ ಇಕ್ಬಾಲ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮೂವರು ಸೈನಿಕರು ಮೃತಪಟ್ಟಿದ್ದಾರೆ. ಮೂರನೇ ಸಾವು ಸ್ಥಳದಲ್ಲೇ ಸಂಭವಿಸಿದೆಯೇ ಅಥವಾ ಸೈನಿಕನು ಗಾಯಗಳಿಗೆ ಬಲಿಯಾಗಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದರು.
“ದುಃಖಿತ ಕುಟುಂಬಗಳಿಗೆ ಭಾರತೀಯ ಸೇನೆಯು ಸಂತಾಪವನ್ನ ವ್ಯಕ್ತಪಡಿಸುತ್ತದೆ” ಎಂದು ಚಿನಾರ್ ಕಾರ್ಪ್ಸ್ ಟ್ವೀಟ್ ಮಾಡಿದೆ.
ಇಸ್ರೋ ಮತ್ತೊಂದು ಮಹತ್ವದ ಸಾಧನೆ ; ಬಾಹ್ಯಾಕಾಶದಲ್ಲಿ ‘ಸಸ್ಯ’ಗಳ ಬೆಳವಣಿಗೆ, ಮೊಳಕೆಯೊಡೆದ ‘ಅಲಸಂದೆ’
BREAKING : ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಓರ್ವ ಬಾಣಂತಿಯ ಸಾವು!
BREAKING : ಸೂರತ್ ವಿಮಾನ ನಿಲ್ದಾಣದಲ್ಲಿ ‘CISF ಯೋಧ’ ಗುಂಡು ಹಾರಿಸಿಕೊಂಡು ಆತ್ಮಹತ್ಯೆ