ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳು ಹೆಸರು ಬದಲಾಯಿಸಿಕೊಂಡಿದ್ದರು. ಆರೋಪಿಗಳಾದ ರಶೀದ್ ಎಂಬಾತ ಶಂಕರ್ ಶರ್ಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದರೆ. ಮೊಹಮ್ಮದ್ ಹನೀಫ್ ಎಂಬಾತ ಬಾಬಾ ಶರ್ಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಆರೋಪಿಗಳ ಮನೆಯಲ್ಲಿ ಲ್ಯಾಪ್ ಟಾಪ್ ಸೀಜ್ ಮಾಡಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
ನಕಲಿ ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರದಿಂದ ಬಂಧಿತರಾಗಿರುವ 4 ಜನರ ಬಗ್ಗೆ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದು, “ನನಗೆ ಬಂದ ಮಾಹಿತಿಯ ಪ್ರಕಾರ, ಅವರು ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ. ಅವರು ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದಾರೆ. ಅವರು ಇಲ್ಲಿಗೆ ಏಕೆ ಬಂದರು ಎಂದು ಪೊಲೀಸರು ತನಿಖೆ ನಡೆಸಲಿದ್ದಾರೆ.
ಜಿಗಣಿ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಗಣಿ ಅಪಾರ್ಟ್ ಮೆಂಟ್ ನಲ್ಲಿ ಇಬ್ಬರು ಮಕ್ಕಳು ಹಾಗೂ ಪತ್ನಿಯೊಂದಿಗೆ ವಾಸವಾಗಿದ್ದ ಪಾಕ್ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.