ಬೆಂಗಳೂರು : ಮಾಜಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ತಮ್ಮ ಒಡೆತನದ ಕಂಪನಿಯ ಉದ್ಯೋಗಿಗಳ ಪಿಎಫ್ ಹಣವನ್ನು ಪಾವತಿಸದೇ ವಂಚಿಸಿರುವ ಹಿನ್ನೆಲೆ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ ರಾಬಿನ್ ಉತ್ತಪ್ಪ ಅವರು ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಹೆಸರಿನ ಖಾಸಗಿ ಕಂಪನಿಯನ್ನು ನಡೆಸುತ್ತಿದ್ದು, ಈ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದ ಪಿಎಫ್ ಹಣವನ್ನು ನೀಡಿಲ್ಲ. ಸುಮಾರು 23 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ರಾಬಿನ್ ಉತ್ತಪ್ಪ ವಂಚಿಸಿದ್ದಾರೆ ಎಂದು ಉದ್ಯೋಗಿಗಳು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಈಗ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ ಎನ್ನಲಾಗಿದೆ.
ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ರೆಡ್ಡಿ ಅವರು ಡಿಸೆಂಬರ್ 4 ರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದು ವಾರೆಂಟ್ ಜಾರಿ ಮಾಡಿ ಪೊಲೀಸರಿಗೆ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.