ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದಾರೆ ಎಂದು ವರದಿಯಾಗಿದೆ. ಅಬಕಾರಿ ನೀತಿಯ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಸಂಪೂರ್ಣ ಜವಾಬ್ದಾರಿಯನ್ನ ಮನೀಶ್ ಸಿಸೋಡಿಯಾ ಅವರ ಮೇಲೆ ಹಾಕಿದ್ದಾರೆ ಎನ್ನಲಾಗ್ತಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನ ಸಿಬಿಐ ಔಪಚಾರಿಕವಾಗಿ ಬಂಧಿಸಿದ ಕೆಲವೇ ಗಂಟೆಗಳ ನಂತರ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ವರದಿಯ ಪ್ರಕಾರ, “ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಕೋರಿದೆ. ಕೇಜ್ರಿವಾಲ್ ಪ್ರಶ್ನೆಗಳಿಗೆ ನೇರ ಉತ್ತರಗಳನ್ನ ನೀಡುತ್ತಿಲ್ಲ ಮತ್ತು ವಿಜಯ್ ನಾಯರ್ ಅವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಅಂಶವನ್ನು ಅವರು ನಿರಾಕರಿಸುತ್ತಿದ್ದಾರೆ ಎಂದು ಸಿಬಿಐ ಹೇಳಿದೆ. ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದ್ದೇನೆ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ ಎಂದು ಸಿಬಿಐ ಹೇಳಿದೆ. ಸಿಬಿಐ ಪ್ರಕಾರ, ಕೇಜ್ರಿವಾಲ್ ಅವರು ಅಬಕಾರಿ ನೀತಿಯ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಸಂಪೂರ್ಣ ಜವಾಬ್ದಾರಿಯನ್ನ ಮನೀಶ್ ಸಿಸೋಡಿಯಾ ಅವರ ಮೇಲೆ ಹಾಕಿದ್ದಾರೆ” ಎಂದು ವರದಿಯಾಗಿದೆ.
Rain Alert : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ : ʻIMDʼ ಯಿಂದ ʻರೆಡ್, ಯೆಲ್ಲೋʼ ಅಲರ್ಟ್ ಘೋಷಣೆ
ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ