ಬೆಂಗಳೂರು : ಜಪ್ತಿ ಮಾಡಿದಂತಹ ಆಟೋವನ್ನು ಬಿಡುಗಡೆಗೊಳಿಸಲು ಎಎಸ್ಐ ಅಧಿಕಾರಿ ಒಬ್ಬ ಆಟೋ ಚಾಲಕನ ಬಳಿ 40,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ನಡೆದಿದೆ.
ಬೆಂಗಳೂರಿನ ಸಂಜಯ್ ನಗರ ಠಾಣೆಯ ASI ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ 40,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಎಎಸ್ಐ ವಿಜಯಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. 50 ಸಾವಿರ ರೂಪಾಯಿ ಲಂಚ ನೀಡುವಂತೆ ಎಎಸ್ಐ ವಿಜಯಕುಮಾರ್ ಬೇಡಿಕೆ ಇಟ್ಟಿದ್ದ.
ಮೊಹಮ್ಮದ್ ಸುಜತ್ ನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಬ್ರೋಕರ್ ಸಯ್ಯದ್ ರಿಜ್ವಾನ್, ಎ ಎಸ್ ಐ ವಿಜಯ್ ಕುಮಾರ್ ನನ್ನು ಇದೀಗ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 40,000 ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ವಿಜಯಕುಮಾರ್ ನನ್ನ ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ