ಬೆಳಗಾವಿ : ಇತ್ತೀಚೆಗೆ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿಯೇ ಎಸ್ ಡಿ ಎ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಒಂದು ಘಟನೆ ಇಡೀ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಆ ಬಳಿಕ ಇದೀಗ ಎಎಸ್ಐ ಒಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಂತಹ ASI ಅವರನ್ನ ಶಂಭು ಮೇತ್ರಿ (52) ಎಂದು ತಿಳಿದುಬಂದಿದೆ.ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಶನಿವಾರ ಅನಂತಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.