ಹುಬ್ಬಳ್ಳಿ : ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಎಸ್ ಎಸ್ ಐ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿ ಕೋರ್ಟ್ ವೃತ್ತದ ಬಳಿಯ ಫ್ಲೈಓವರ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಎಎಸ್ ಐ ನಾಭಿರಾಜ್ ದಯಣ್ಣವರರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.
ಸೆ.10 ರಂದು ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಫ್ಲೈಓವರ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಎಎಸ್ಐ ನಾಭಿರಾಜ್ ಕರ್ತವ್ಯದ ಮೇಲೆ ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದಿದೆ. ತೀವ್ರ ರಕ್ತಸ್ರಾವ ಉಂಟಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.