ಅಸ್ಸಾಂ:ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ಅಸ್ಸಾಂನ ದೇರ್ಗಾಂವ್ನಲ್ಲಿ 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಥ್ಖೇಲಿಯಾದಿಂದ ಬಲಿಜಾನ್ಗೆ 45 ಸದಸ್ಯರನ್ನು ಒಳಗೊಂಡ ಪಿಕ್ನಿಕ್ ಪಾರ್ಟಿಯನ್ನು ಸಾಗಿಸುತ್ತಿದ್ದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಕ್ನಿಕ್ ಪಾರ್ಟಿಯು ಬೆಳಿಗ್ಗೆ 3 ಗಂಟೆಯ ಸುಮಾರಿಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಿತು ಬಲಿಜಾನ್ ಗೆ ತಲುಪಿದಾಗ, ಮಾರ್ಗರಿಟಾದಿಂದ ಬರುತ್ತಿದ್ದ ಕಲ್ಲಿದ್ದಲು ತುಂಬಿದ ಟ್ರಕ್ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು.