ನವದೆಹಲಿ: ದೇಶದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ.
ಇಂದು ಸಂಜೆ 4 ಗಂಟೆಗೆ ನವದೆಹಲಿಯಲ್ಲಿ ನಡೆಯಲಿರುವ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಚುನಾವಣಾ ದಿನಾಂಕಗಳನ್ನು ಘೋಷಿಸಲಿದ್ದಾರೆ.
ಚುನಾವಣೆ ಎದುರಿಸಲಿರುವ ರಾಜ್ಯಗಳು:
ಪಶ್ಚಿಮ ಬಂಗಾಳ
ತಮಿಳುನಾಡು
ಕೇರಳ
ಅಸ್ಸಾಂ
ಪುದುಚೇರಿ (ಕೇಂದ್ರಾಡಳಿತ ಪ್ರದೇಶ)








