ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಿಮ್ಮ ಊರಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ (RO Plants) ಯಾವುದೇ ತಾಂತ್ರಿಕ ತೊಂದರೆ ಅಥವಾ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು ಈಗ ನೇರವಾಗಿ ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಈ ಕುರಿತು ಪ್ರಕಟಣೆ ಹೊರಡಿಸಿದೆ.
ಯಾವಾಗ ದೂರು ನೀಡಬಹುದು?
ಶುದ್ಧ ಕುಡಿಯುವ ನೀರಿನ ಘಟಕದ ಕಾರ್ಯಾಚರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ.
ಘಟಕದ ಕಾಯಿನ್ ಬಾಕ್ಸ್ನಲ್ಲಿ (Coin Box) ತಾಂತ್ರಿಕ ದೋಷ ಕಂಡುಬಂದಲ್ಲಿ.
ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾದಾಗ ಸಾರ್ವಜನಿಕರು ಸುಮ್ಮನೆ ಕೂರದೇ ತಕ್ಷಣವೇ ದೂರು ದಾಖಲಿಸಬಹುದು.
ಸಹಾಯವಾಣಿ ಸಂಖ್ಯೆ:
ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖೆಯು ‘ಪಂಚಮಿತ್ರ’ ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಜನರು ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದು:
ಪಂಚಮಿತ್ರ ಸಹಾಯವಾಣಿ: 8277506000
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಸುರಕ್ಷಿತ ಮತ್ತು ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ. ನಿಮ್ಮ ಭಾಗದ ನೀರಿನ ಘಟಕಗಳಲ್ಲಿ ಸಮಸ್ಯೆ ಇದ್ದರೆ ತಕ್ಷಣವೇ ಈ ಉಚಿತ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿ.








