ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆಯಿತು. ಕೃಷಿ ಇಲಾಖೆಯ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಈ ಒಂದು ವಿಧೇಯಕವನ್ನು ಮಂಡಿಸಿದರು.
ವಿಧಾನಸಭೆಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಂಡ್ಯದಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯವಾಗಿ ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದ್ದು, ಮಂಡ್ಯ ವಿಸಿ ಫಾರ್ಮ್ ನಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಯ ಬೆಳೆಗಳ ಉತ್ಪಾದನಾ ಕ್ಷೇತ್ರದಲ್ಲಿ ಅಧ್ಯಯನ ಸಂಶೋಧನೆಗೆ ಅವಕಾಶವಿದೆ.
ಜಿಕೆವಿಕೆ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಕಾಲೇಜುಗಳು ಸಂಶೋಧನಾ ಸಂಸ್ಥೆ, ಪ್ರಯೋಗಾಲಯ, ಹಾಸ್ಟೆಲ್ ಮತ್ತು ಗ್ರಂಥಾಲಯಗಳನ್ನು ವರ್ಗಾವಣೆ ಮಾಡುವ ಬಗ್ಗೆಯೂ ಉಲ್ಲೇಖಿಸಲಾಗಿದೆ. ಇದಕ್ಕೆ ಉತ್ತರ ಕರ್ನಾಟಕ ಮೂಲದ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಯಿತು.