ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ.
ಅತಿಶಿ ಮರ್ಲೇನಾ ಅವರು ಇಂದು ರಾಜಭವನದಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆಯನ್ನು ಅವರಿಗೆ ಸಲ್ಲಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಬಹುಮತ 36. 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ 26 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬಂದಿತು. ಆಮ್ ಆದ್ಮಿ ಪಕ್ಷ (ಎಎಪಿ) 40 ಸ್ಥಾನಗಳನ್ನು ಕಳೆದುಕೊಂಡು 22 ಸ್ಥಾನಗಳಿಗೆ ಇಳಿದಿದೆ.
ದೆಹಲಿಯ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ಅಮಿತ್ ಶಾ ಅವರ ನಿವಾಸದಲ್ಲಿ ಸಭೆ ನಡೆಸಲಿದೆ. ಜೆಪಿ ನಡ್ಡಾ ಸೇರಿದಂತೆ ಹಲವು ಬಿಜೆಪಿ ನಾಯಕರು ಬೆಳಿಗ್ಗೆ 11 ಗಂಟೆಗೆ ಗೃಹ ಸಚಿವರ ಮನೆಗೆ ಹೋಗಲಿದ್ದಾರೆ.
#WATCH | Delhi CM Atishi reaches Raj Niwas to submit her resignation
BJP emerged victorious in #DelhiAssemblyElection2025 yesterday after winning 48 out of 70 seats pic.twitter.com/kg5JpaFs4F
— ANI (@ANI) February 9, 2025