ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಪೊಲೀಸರು ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಮುಖಂಡನ ಮತ್ತೆ ಇಬ್ಬರು ಪುತ್ರರನ್ನ ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. (26) ಹಾಗೂ ಹಮ್ಝ (24) ಎನ್ನುವವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಜನವರಿ 31ರಂದು ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಾಯತ್ರಿ ಹಾಗೂ ಕಾನ್ಸ್ಟೇಬಲ್ಗಳಾದ ಹರೀಶ್ ಮತ್ತು ಕೆಂಚಪ್ಪ ಮೇಲೆ ಹಲ್ಲೆ ಮಾಡಿದ್ದರು ಪೊಲೀಸರ ಮೇಲೆ ಹಲ್ಲೆ ಮಾಡಿ ತಲೆಮರಿಸಿಕೊಂಡಿದ್ದರು ಇದೀಗ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.








