ಬೆಳಗಾವಿ : 500 ರೂ. ಮುಖಬೆಲೆಯ ಖೋಟಾ ನೋಟು ಬೆಳಗಾವಿಯಲ್ಲಿ ಚಲಾವಣೆ ಮಾಡಲು ಯತ್ನಿಸಿದ್ದ ಗೋವಾ ಗ್ಯಾಂಗ್ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರದ ಖಡೇಬಜಾರ್ ಅಂಗಡಿಯಲ್ಲಿ ಖೋಟಾ ನೋಟು ಚಲಾವಣೆಗೆ ಆರೋಪಿಗಳು ಯತ್ನಿಸಿದ್ದಾರೆ. ಸಂಶಯಗೊಂಡ ಅಂಗಡಿ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆಗಿ ಕಾರ್ಯಾಚರಣೆಗೆ ಇಳಿದ ಮಾರ್ಕೆಟ್ ಠಾಣೆ ಪೊಲೀಸರು, ಗೋವಾ ರಾಜ್ಯದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಒಂದು ಕಾರ್, 2 ಲಕ್ಷದ 40 ಸಾವಿರ ಖೋಟಾ ನೋಟು ಮತ್ತು 4 ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಗೋವಾದಲ್ಲಿ 1 ಲಕ್ಷಕ್ಕೆ 2 ಲಕ್ಷ ಖೋಟಾ ನೋಟು ಕೊಟ್ಟು ಬೆಳಗಾವಿಗೆ ಬಂದಿದ್ದ ಈ ಗ್ಯಾಂಗ್, ಇಲ್ಲಿ ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದರು ಎಂಬ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.








