ಉಡುಪಿ : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಯತ್ನ ನಡೆದಿದೆ.
ಹೌದು, ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬುವರ ಮೇಲೆ ದಾಳಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆಗೆ ಯತ್ನಿಸಲಾಗಿದೆ.
ಅಬೂಬಕ್ಕರ್ ನನ್ನು ಅಡ್ಡಗಟ್ಟಿ ಸುಶಾಂತ್, ಸಂದೇಶ್ ಪೂಜಾರಿ ಎಂಬುವರು ಕೊಲೆಗೆ ಯತ್ನಿಸಿದ್ದಾರೆ ಕೂಡಲೇ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.