ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಪ್ರೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲೇತುವೆ) ಮೇಲೆ ಅಳವಡಿಸಲಾದ ಕೇಬಲ್‌ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡಿರುವುದರಿಂದ, ಅವುಗಳ ಸಮಗ್ರತೆಯನ್ನು ಪರಿಶೀಲಿಸುವ ಸಲುವಾಗಿ ಅಂತಿಮ ಲೋಡ್ ಟೆಸ್ಟಿಂಗ್ ನಡೆಸಬೇಕಾಗಿದೆ.
ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೋರಿಕೆ ಬಂದಿರುವುದರಿಂದ ದಿನಾಂಕ: 05-05-2026 ರಂದು ಬೆಳಿಗ್ಗೆ 05:00 ಗಂಟೆಯಿಂದ ದಿನಾಂಕ: 08-05-2026 ರಂದು ಬೆಳಿಗ್ಗೆ 11:00 ಗಂಟೆಯವರೆಗೆ ಪೀಣ್ಯ ಎಲಿವೇಟೆಡ್ ಫೈಓವರ್ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ.
ಸಂಚಾರ ನಿರ್ಬಂಧ:
ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಪ್ರೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲೇತುವೆ) ಮೇಲೆ ಕೆನ್ನಮೆಟಲ್ ವಿಡಿಯಾ Upper ramp ಎಸ್.ಆರ್.ಎಸ್ Down ramp ವರೆಗೆ ಎರಡು ಕಡೆಯಲ್ಲಿ ಫೈಓವರ್ ಮೇಲೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
ಪರ್ಯಾಯ ಮಾರ್ಗಗಳು:
1. ನೆಲಮಂಗಲ ಬೆಂಗಳೂರು ಕಡೆಗೆ:
ಕೆನ್ನಮೆಟಲ್ ಫ್ಯಾಕ್ಟರಿಹತ್ತಿರ ಫೈಓವರ್‌ನ ಫೈಓವರ್ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ → ದಾಸರಹಳ್ಳಿ → ಜಾಲಹಳ್ಳಿ ಕ್ರಾಸ್ → ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ → ಎಸ್.ಆರ್ಸ.ಎಸ್ ಜಂಕ್ಷನ್ ಗೊರಗುಂಟೆಪಾಳ್ಯ
ಫೈಓವರ್ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ -ಎಸ್.ಆರ್.ಎಸ್ ಜಂಕ್ಷನ್ → ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್→ ಜಾಲಹಳ್ಳಿ ಕ್ರಾಸ್→ ದಾಸರಹಳ್ಳಿ 8ನೇ ಮೈಲಿ → ಪಾರ್ಲೆಜಿ ಟೋಲ್
ಪೀಣ್ಯ ಮೇಲೇತುವೆ ಮೂಲಕ ಸಾಗುವ ವಾಹನಗಳ ರಸ್ತೆ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಕಂಡ ಮಾರ್ಪಾಡುಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಸಿದೆ.
"ಸಂಚಾರಸಲಹೆ/Traffic advisory" pic.twitter.com/Fuw8r1EuJx
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) May 1, 2026








