ಬೆಂಗಳೂರು : ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.
ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆಯಲ್ಲೂ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನೈಸ್ ರಸ್ತೆಯಲ್ಲಿ ರಾತ್ರಿ 8ರಿಂದಲೇ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ರಾತ್ರಿ 10 ಗಂಟೆಯ ನಂತರ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್ ಆಗಲಿದೆ. ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳಿಗೆ ತೆರಳಿ ಪ್ರಯಾಣಿಕರು ಸಂಚಾರ ಮಾಡಬಹುದು.
ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ, ಚರ್ಚ್ ಸ್ಟ್ರೀಟ್ನ ಬ್ರಿಗೇಡ್ ರಸ್ತೆ ಜಂಕ್ಷನ್ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ, ರೆಸಿಡೆನ್ಸಿ ರಸ್ತೆಯ ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೊ ಹಾಲ್ ಜಂಕ್ಷನ್‌ವರೆಗೆ, ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಎಸ್‌ಬಿಐ ವೃತ್ತದವರೆಗೆ ಸಂಚಾರ ವ್ಯವಸ್ಥೆ ನಿಷೇಧಿಸಲಾಗಿದೆ.
ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶ ಇದೆ.
ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ ಮೈದಾನ, 60 ಅಡಿ ಮಾದರಿ ರಸ್ತೆ ಎಡಭಾಗದಲ್ಲಿ (ಮುನಿರೆಡ್ಡಿ ಕಲ್ಯಾಣ ಮಂಟಪದಿಂದ ಕೆನರಾ ಬ್ಯಾಂಕ್ ಜಂಕ್ಷನ್‌ವರೆಗೆ) ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಲಾಗಿದೆ.
ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.
ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ… pic.twitter.com/PZHxUy5LIK
— DIPR Karnataka (@KarnatakaVarthe) December 30, 2025
ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್… pic.twitter.com/LgQhfNw1GE
— DIPR Karnataka (@KarnatakaVarthe) December 30, 2025
ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶ ಇದೆ.
ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ… pic.twitter.com/7VXPWBIZpE
— DIPR Karnataka (@KarnatakaVarthe) December 30, 2025
ಹೊಸ ವರ್ಷಾಚರಣೆಯ ವೇಳೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ#NewYear2026 pic.twitter.com/QDAsMpt7Kt
— DIPR Karnataka (@KarnatakaVarthe) December 30, 2025
ಹೊಸ ವರ್ಷಾಚರಣೆಯ ವೇಳೆ ಬಿಎಂಟಿಸಿ ಬಸ್‌ಗಳು ಹಾಗೂ ಟಿ.ಟಿ. ವಾಹನಗಳು ಸಂಚರಿಸುವ ಮಾರ್ಗಗಳು:#NewYear2026 pic.twitter.com/yHjxfUnCw8
— DIPR Karnataka (@KarnatakaVarthe) December 30, 2025