ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ರಿಂಗ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ 26ರವರೆಗೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ ಲೇ ಅರೇಬಿಯಾ, ಬಿರಿಯಾನಿ ಜೋನ್ ಕ್ರೋಮ್ ಜಂಕ್ಷನ್ ನಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ.
ಹೆಚ್.ಎ.ಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ:19.09.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.
ದಿನಾಂಕ ಮತ್ತು ಸಮಯ 19.09.2025 ರಿಂದ 26.09.2025ರವರೆಗೆ (ಒಂದು ವಾರ)
ವಾಹನ ನಿರ್ಬಂಧಿಸಲಾದ ರಸ್ತೆ ಮಾರ್ಗ
+ ಲೇ ಅರೇಬಿಯಾ, ಬಿರಿಯಾನಿ ಜೋನ್ ಮತ್ತು ಕ್ರೋಮ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ
← ಮಹದೇವಪುರ ಕಾರ್ತಿಕ್‌ನಗರ ಕಡೆಯಿಂದ ಲೇ ಅರೇಬಿಯಾ ಮತ್ತು ಬಿರಿಯಾನಿ ಪಾಯಿಂಟ್ ಮೂಲಕ ಮಾರತ್ಹಳ್ಳಿ – ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಕಡ್ಡಾಯವಾಗಿ ಕಲಾಮಂದಿರದ ಬಳಿ ಸರ್ವಿಸ್ ರಸ್ತೆಗೆ ತೆರಳಿ ಮಾರತ್‌ಹಳ್ಳಿ ಕಾಂತಿ ಸ್ವೀಟ್ಸ್ ಅಂಡರ್‌ಪಾಸ್ ಬಳಿ ಯು-ಟರ್ನ್ ತೆಗೆದುಕೊಂಡು, ಮಾರತಹಳ್ಳಿ ಸೇತುವೆಯ ಬಳಿ ಎಡಕ್ಕೆ ತಿರುಗಿ ಮುನ್ನೇಕೊಳಾಲ, ಕಾಡುಬೀಸನಹಳ್ಳಿ ಜಂಕ್ಷನ್, ಪಣತ್ತೂರು ಮತ್ತು ಕರಿಯಮ್ಮನ ಅಗ್ರಹಾರ ಕಡೆಗೆ ಹೋಗಲು ಸರ್ವಿಸ್ ರಸ್ತೆಯಲ್ಲಿ ಸಂಚರಿಸುವುದು.
← ದೇವರಬೀಸನಹಳ್ಳಿ ಹಾಗೂ ಬೆಳಂದೂರು ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಡ್ಡಾಯವಾಗಿ ಹೊರ ವರ್ತುಲ ರಸ್ತೆಯ ಮೂಲಕವೆ ಸಂಚರಿಸುವುದು.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… https://t.co/76SQwyrMqT pic.twitter.com/LzlG4WvKmB
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) September 17, 2025