ಬೆಂಗಳೂರು : ಅವಳೇ ನನ್ ಹೆಂಡ್ತಿ ಸಿನಿಮಾ ಖ್ಯಾತಿಯ ನಿರ್ದೇಶಕ ಎಸ್ ಉಮೇಶ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಉಮೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಸಕ್ರಿಯರಾಗಿದ್ದರು. ಆದರೆ. ಅನಾರೋಗ್ಯದಿಂದ ಬಳಲುತ್ತಿ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಉಮೇಶ್ ಅವರ ನಿರ್ದೇಶನದ ಕಾಶಿನಾಥ್ ನಟನೆಯ ‘ಅವಳೇ ನನ್ ಹೆಂಡ್ತಿ’ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ಅವರು , ನಂತ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.