ಬೆಳಗಾವಿ : ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಡಿಸೆಂಬರ್ 19 ರವರೆಗೆ ಈ ಒಂದು ಅಧಿವೇಶನ ನಡೆಯಲಿದೆ ಈಗಾಗಲೇ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ತಂತ್ರಗಳನ್ನು ಹೂಡಿದ್ದು ಅದಕ್ಕೆ ಪ್ರತಿ ತಂತ್ರವಾಗಿ ಕಾಂಗ್ರೆಸ್ ಕೂಡ ಎಲ್ಲದಕ್ಕೂ ಸಿದ್ಧವಾಗಿದೆ. ಕಲಾಪ ಆರಂಭದ ವೇಳೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ಇದೇ ಸಂದರ್ಭದಲ್ಲಿ, ಸಾಲುಮರದ ತಿಮ್ಮಕ್ಕ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೇಲೂರಿನಲ್ಲಿ ಸಾಲುಮರದ ತಿಮ್ಮಕ್ಕ ವಸ್ತು ಸಂಗ್ರಹಲಕ್ಕೆ ಚಿಂತನೆ ನಡೆಸಲಾಗುತ್ತಿದೆ. ವಸ್ತು ಸಂಗ್ರಹಾಲಯ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ನೀಡಲು ಕೂಡ ತೀರ್ಮಾನ ಮಾಡಿದ್ದೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.








