ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಕೊಟ್ಟ ಭಾಷಣ ಮಾಡದೇ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಅವರು ರೆಡಿ ಮಾಡಿಕೊಂಡ ಭಾಷಣವನ್ನು ಓದುವಂತಿಲ್ಲ. ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದರು.
ಮನ್ ರೇಗಾ ಬದಲಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಸಂವಿಧಾನದ ಪ್ರಕಾರ ರಾಜ್ಯಪಾಲರು ಭಾಷಣ ಮಾಡವುದು ಕರ್ತವ್ಯ ಎಂದು ಹೇಳಿದ್ದಾರೆ.
ರಾಜ್ಯಪಾಲರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಹರಿಪ್ರಸಾದ್ ಮತ್ತು ಇತರ ಕಾಂಗ್ರೆಸ್ ನಾಯಕರು, ಅವರನ್ನು ತಡೆಯಲು ಪ್ರಯತ್ನಿಸಿದರು, ಆದರೆ ರಾಜ್ಯಪಾಲರು ಅದಕ್ಕೆ ಸ್ಪಂದಿಸದೆ ನಿರ್ಗಮಿಸಿದರು.
ರಾಜ್ಯಪಾಲರನ್ನು ತಡೆಯುವ ವೇಳೆ ಬಿ.ಕೆ ಹರಿಪ್ರಸಾದ್ ಬಟ್ಟೆ ಹರಿದಿದ್ದು, ಭಾರಿ ಹೈಡ್ರಾಮಾಗೆ ಕಾರಣವಾಯಿತು. ರಾಜ್ಯಪಾಲರನ್ನು ಅಡ್ಡಗಟ್ಟುವ ವೇಳೆ ಬಿ.ಕೆ ಹರಿಪ್ರಸಾದ್ ಅವರ ಶರ್ಟ್ ಕೂಡ ಹರಿದಿದೆ ಎನ್ನಲಾಗಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್ , ಬಿಜೆಪಿಯವರೇ ನನ್ನ ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದಾರೆ.
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದ್ದು, ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ ಬದ್ಧವಾಗಿದೆ. ಅವರಿಗೆ ನನ್ನ ಶುಭಾಶಯ, ಜೈ ಹಿಂದ್, ಜೈಕರ್ನಾಟಕ ಎಂದು ರಾಜ್ಯಪಾಲರು ಭಾಷಣ ಮುಗಿಸಿದ್ದಾರೆ. ಈ ಮೂಲಕ ಸರ್ಕಾರ ಕೊಟ್ಟ ಭಾಷಣ ಓದದೇ ಕೆಲ ಅಂಶಗಳನ್ನು ಮಾತ್ರ ಓದಿ ಭಾಷಣ ಮುಗಿಸಿದ್ದಾರೆ.
ಬಿಜೆಪಿ ಕಿಡಿ
ರಾಜ್ಯಪಾಲ ಎಂಬುದು ಒಂದು ಸಾಂವಿಧಾನಿಕ ಹುದ್ದೆ. ರಾಜ್ಯಪಾಲರಿಗೆ ಗೌರವ ನೀಡುವುದು ಸಂವಿಧಾನಕ್ಕೆ ಗೌರವ ನೀಡಿದಂತೆ. ಆದರೆ ಇದಾವುದನ್ನೂ ಪರಿಗಣಿಸದೆ ಲೋಕಲ್ ರೌಡಿಯ ರೀತಿ ಆವಾಜ್ ಹಾಕಿರುವುದು ಅತ್ಯಂತ ಖಂಡನೀಯ. ಸದನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಯದ ರೌಡಿ ಬಿ.ಕೆ. ಹರಿಪ್ರಸಾದ್‌ರನ್ನು ಸದನದಿಂದ ಕೂಡಲೇ ಅಮಾನತು ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಬಿಜೆಪಿ ಟ್ವೀಟ್ ನಲ್ಲಿ ಕಿಡಿಕಾರಿದೆ.
https://twitter.com/BJP4Karnataka/status/2014221393613955370?s=20








