ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇಂದು ಮತದಾನ ನಡೆಯುತ್ತಿದ್ದು, ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವೃದ್ದೆ ಒಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ.
ತಕ್ಷಣ ಸ್ಥಳೀಯರು ವೃದ್ದೆಯನ್ನು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು ಜಿಲ್ಲೆಯ ಅಮಿನಗಡದಲ್ಲಿ ಮತದಾರರಿಗೆ ಮೂಲಭೂತ ಸೌಲಭ್ಯದ ಕೊರತೆ ಉಂಟಾಗಿದೆ. ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಮತದಾರರು ಪರದಾಟ ನಡೆಸಿದರು.








