ಕಲಬುರ್ಗಿ : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಅಮಾಯಕರು ಬಲಿಯಾಗಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ವ್ಯಾಪಕ ಆಕೋಶ ವ್ಯಕ್ತವಾಗುತ್ತಿತ್ತು, ಕಲ್ಬುರ್ಗಿಯಲ್ಲಿ ಕೂಡ ಬಜರಂಗದಳ ಕಾರ್ಯಕರ್ತರು ರಸ್ತೆಯ ಮೇಲೆ ಪಾಕಿಸ್ತಾನ ಧ್ವಜ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ.
ಹೌದು ಕಲ್ಬುರ್ಗಿ ನಗರದ ಜಗತ್ ವೃತ ಸಾರ್ವಜನಿಕ ಶೌಚಾಲಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪಾಕಿಸ್ತಾನ ಧ್ವಜ ಆಂಟಿಸಿ ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ. ಬಳಿಕ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.