ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಕಾಂಗ್ರೆಸ್ಸಿನ 10 ಕಾರ್ಯಕರ್ತರನ್ನು ಸಹ ರೆಸ್ಟ್ ಮಾಡಿದ್ದಾರೆ. ಕಾರ್ತಿಕ್ (25), ಮುಕ್ಕಣ್ಣ (28), ಇನಾಯತುಲ್ಲಾ (24), ರಾಜು (20), ಮುಸ್ತಫಾ (22), ಶ್ರೀಕಾಂತ್ (30), ಮೊಹಮ್ಮದ್ ರಸೂಲ್ (35), ಬಾಬು (38), ವೆಂಕಟೇಶ್ (38), ಮುಬಾಶೀರ್ (25) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಗೆ ಬ್ರೂಸ್ ಪೇಟೆ ಠಾಣೆ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ.
ಮೂವರು ಗನ್ ಮ್ಯಾನ್ ಗಳು ಅರೆಸ್ಟ್
ಇನ್ನು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸತೀಶ್ ರೆಡ್ಡಿ ಆಪ್ತ ಗುರುಚರಣ್ ಸಿಂಗ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಈ ವೇಳೆ ತನಿಖೆ ನಡೆಸಲಾಗಿದ್ದು, ಗುರುಚರಣ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಖಾಸಗಿ ಗನ್ ಮ್ಯಾನ್ ಗಳಾದ ಮಹೇಂದ್ರ ಸಿಂಗ್, ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳಾಗಿದ್ದಾರೆ. ಸತೀಶ್ ರೆಡ್ಡಿ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಆಪ್ತರಾಗಿದ್ದಾರೆ..








