ಬೆಂಗಳೂರು : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷದ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದರು.
ಇದೀಗ ಬಳ್ಳಾರಿ ಗಕಭೆ ಪ್ರಕರಣದ 25 ಆರೋಪಿಗಳಿಗೆ ಬೆಂಗಳೂರಿನ 42ನೇ ACJM ಕೋರ್ಟ್ ಜಾಮಿನು ನೀಡಿದೆ. ಕ್ರೈಂ ನಂಬರ್ ನಾಲ್ಕರಲ್ಲಿ ಇರುವ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು.
ಈ ವೇಳೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ ತಗುಲಿ ಸಾವನಪ್ಪಿದ್ದ. ಘಟನೆ ಸಂಬಂಧ ರಾಜ್ಯ ಸರ್ಕಾರ ಎಸ್ಪಿ ಪವನ್ ನಜ್ಜುರ್ ಅವರನ್ನು ಸಸ್ಪೆಂಡ್ ಮಾಡಿತ್ತು. ಅಲ್ಲದೆ ಡಿಐಜಿಪಿ ವರ್ತಿಕಾ ಕಟಿಯರವರನ್ನು ಸಹ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಪ್ರಕರಣದ 25 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.








