ಬೆಂಗಳೂರು : ಬಳ್ಳಾರಿಯಲ್ಲಿ ಗಲಾಟೆ ಹಾಗು ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ SP ಪವನ್ ನಜ್ಜುರ್ ಸಸ್ಪೆಂಡ್ ಆಗಿದ್ದರು. ಇದರಿಂದ ನೊಂದ ಅವರು ತುಮಕೂರಲ್ಲಿ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಾಸಿದ್ದರು ಎಂದು ಹೇಳಲಾಗಿತ್ತು. ಇದೀಗ ಬಳ್ಳಾರಿ ಎಸ್‌ಪಿ ಪವನ್ ನಿಜ್ಜೂರ್ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಅವರ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಹೇಳಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಶಿರಾ ಬಳಿಯ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪವನ್ ಆತ್ಮಹತ್ಯೆಗೆ ಯತ್ನಿಸಿದ್ದ ವರದಿ ಸುಳ್ಳು ಎಂದಿದ್ದಾರೆ.ಸರ್ಕಾರ ಅಮಾನುತು ಆದೇಶ ಪ್ರಕಟಿಸಿದ ಬಳಿಕ ಬಳ್ಳಾರಿ ಎಸ್‌ಪಿ ಪವನ್ ನಿಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು. ಜ.1 ರಂದು ಅಧಿಕಾರ ಸ್ವೀಕರಿಸಿದ್ದ ಪವನ್ ನಿಜ್ಜೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಅಡಿ ಸರ್ಕಾರ ನಿನ್ನೆ (ಜ.2) ರಾತ್ರಿ ಅಮಾನತು ಮಾಡಿ ಆದೇಶ ಪ್ರಕಟಿಸಿತ್ತು.
ರಾತ್ರಿ ಸರ್ಕಾರದ ಆದೇಶ ನೋಡಿ ನಿಜ್ಜೂರ್ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು.ಬಳ್ಳಾರಿಯಿಂದ ಮಂಡ್ಯ ಎಸ್‌ಪಿಯಾಗಿ ವರ್ಗಾವಣೆಯಾಗಿರುವ ಶೋಭಾರಣಿ ಅವರು ಪವನ್ ನಿಜ್ಜೂರ್ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ತಿಳಿಸಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಆತ್ಮಹತ್ಯೆ ಯತ್ನ ಎನ್ನುವುದು ಸುಳ್ಳು. ಸದ್ಯ ಅವರು ತಮ್ಮ ಫಾರ್ಮ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.








