ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ ವನ್ನು ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಇನ್ನೇನು ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟಿಸಲಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಈಡುಗಾಯಿ ಒಡೆದರು. ಬಳಿಕ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಬಾನು ಮುಷ್ತಾಕ್ ಅವರು ಪೂಜೆ ಬಳಿಕ ದೇವಿಯ ಮಂಗಳಾರತಿ ತೆಗೆದುಕೊಂಡರು. ದೇವಿಯ ದರ್ಶನದ ಬಳಿಕ ಭಾವುಕರಾದರು. ಇದೆ ವೇಳೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಸೀರೆ ಉಡುಗೊರೆ ನೀಡಲಾಗಿದ್ದು, ದೇವಿಯ ಪಾದದ ಅಡಿ ಇಟ್ಟು ಪೂಜಿಸಿದ್ದ ಸೀರೆಯನ್ನು ಬಾನು ಮುಷ್ತಾಕ್ ಅವರಿಗೆ ಇದೆ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಉಡುಗೊರೆಯಾಗಿ ನೀಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಸಚಿವ ವೆಂಕಟೇಶ್, ಶಾಸಕ ಜಿಟಿ ದೇವೇಗೌಡ, ಹರೀಶ್ ಗೌಡ ತನ್ವೀರ್ ಸೇಟ್ ಅನಿಲ್ ಚಿಕ್ಕಮಾದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಮೈಸೂರು ಜಿಲ್ಲೆಯ ಪ್ರಮುಖ ನಾಯಕರು ಉಪಸ್ಥಿತರಿದ್ದರು.







