ಚಾಮರಾಜನಗರ : ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ತಲೆಮರೆಸಿಕೊಂಡಿರುವ ಮೂವರ ಪತ್ತೆಗೆ ಬಲೆ ಬೀಸಿದ್ದಾರೆ.
ಬಂಧಿತ ಆರೋಪಿಗಳಾದ ಕೋಲಾರದ ಮಲ್ಲಿಕಾರ್ಜುನ(30), ಯಾದಗಿರಿಯ ಈರಣ್ಣ(32), ಸಿದ್ದರಾಮಯ್ಯ(40), ವಿಜಯಪುರದ ವಿಶ್ವನಾಥ(30) ಅವರನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಬಾಗಲಕೋಟೆಯ ಪುನೀತಾ, ಸ್ನೇಹಿತ್, ಭೀಮನಗೌಡ ಬಂಧನಕ್ಕಾಗಿ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.
ಪ್ರಕರಣ ಹಿನ್ನೆಲೆ?
ಮಾರ್ಚ್ 3 ರಂದು ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿತ್ತು. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲೇ ಇವೆ.
ರೆಸಾರ್ಟ್ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಕಾರಿನಲ್ಲಿ ಬಂಡೀಪುರ ಮಂಗಲ ರಸ್ತೆಯವರೆಗೆ ಹೋದವರು, ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇನ್ನು, ಕುಟುಂಬ ನಾಪತ್ತೆಯಾದ ವಿಚಾರ ತಿಳಿದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.