ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಜೀವನ್ ಬಿಮಾ ನಗರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲಿಸರು ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನ ಮೂಲದ ಸಂತೋಷ್, ಯಶ, ರಾಜೇಶ್ ಎಂದು ಗುರುತಿಸಲಾಗಿದೆ. ಬಂಧಿತರ ಬಳಿ ಇದ್ದ ಹಣ, ಮೊಬೈಲ್, ಲ್ಯಾಪ್ಟಾಪ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈ ಎಕ್ಸ್ಚೇಂಜ್ ಹೆಸರಿನಲ್ಲಿ ಆರೋಪಿಗಳು ಬೆಟ್ಟಿಂಗ್ ಆಡಿಸುತ್ತಿದ್ದರು. ರಾಜಸ್ಥಾನ ಜನರಿಂದ ಬೆಟ್ಟಿಂಗ್ ಕಟ್ಟಿಸಿಕೊಂಡು ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಜೀವನ್ ಬಿಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.