ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಗಣಿ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಗಣಿ ಅಪಾರ್ಟ್ ಮೆಂಟ್ ನಲ್ಲಿ ಇಬ್ಬರು ಮಕ್ಕಳು ಹಾಗೂ ಪತ್ನಿಯೊಂದಿಗೆ ವಾಸವಾಗಿದ್ದ ಪಾಕ್ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.