ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಗುರುತಿನ ಚೀಟಿ ತಯಾರಿಸಿ ಕೊಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಬೆಂಗಳೂರು ಹೊರವಲಯದ ಸೂರ್ಯ ಸಿಟಿಯಲ್ಲಿ ದಂಧೆ ನಡೆಯುತ್ತಿದ್ದು, ಸೈಬರ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿ ಅರ್ನಾಬ್ ಮಂಡಲ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. 8000 ರೂ. ನೀಡಿದರೆ ಆಧಾರ್ ಕಾರ್ಡ್ ಗಳನ್ನು ಮಾಡಿಕೊಡುತ್ತಿದ್ದ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಧಾರ್ ಕಾರ್ಡ್ ಗಳನ್ನು ಕೊಡುತ್ತಿದ್ದ.
ಆರೋಪಿ ಬಾಂಗ್ಲಾ ಪ್ರಜೆಗಳಿಗೆ ಮಾತ್ರ ಗುರುತಿನ ಚೀಟಿ ಮಾಡಿಕೊಡುತ್ತಿದ್ದ. ಸ್ಥಳೀಯ ದಾಖಲೆಗಳನ್ನು ಪಡೆದು ಆನಂತರ ಆಧಾರ್ ಕಾರ್ಡ್ ಕೊಡುತ್ತಿದ್ದ. ಹಲವು ಬಾಂಗ್ಲಾ ವಲಸಿಗರಿಗೆ ಆಧಾರ್ ಕಾರ್ಡ್ ಗಳನ್ನು ಆರೋಪಿ ಮಾಡಿಸಿಕೊಟ್ಟಿದ್ದಾನೆ. ದಾಳಿಯ ವೇಳೆ ಆಧಾರ್ ಕಾರ್ಡ್ ಗಳು, 18 ಮನೆಗಳ ಬಾಡಿಗೆ ಅಗ್ರಿಮೆಂಟ್ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಸೈಬರ್ ಸೆಂಟರ್ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಪೊಲೀಸರ ದಾಳಿ ವೇಳೆ ನಕಲಿ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ. 18 ಮನೆಗೆ ಸಂಬಂಧಿಸಿದ ಲೀಸ್ ಅಗ್ರಿಮೆಂಟ್ ಗಳು, 55 ಆಧಾರ್ ಕಾರ್ಡ್ ಗಳು, 40 ಬ್ಯಾಂಕ್ ದಾಖಲಾತಿ, ಎರಡು ಕಂಪ್ಯೂಟರ್, ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ.