ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರಕಾರವು ಸಿಐಡಿ ತನಿಖೆಗೆ ಒಳಪಡಿಸಿದೆ.
ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯ ಸಂಭ್ರಮಾಚರಣೆಯ ವೇಳೆ 11 ಮಂದಿ ಸಾವಿಗೀಡಾಗಿರುವ ಪ್ರಕರಣದ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ತಿಳಿಸಿದರು.
ಎರಡು ಎಫ್ಐಆರ್ಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮತ್ತೊಂದು ಕಡೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಕೆಎಸ್ಸಿಎ, ಆರ್ಸಿಬಿ, ಡಿಎನ್ಎ ಎಂಟರ್ಟೈನ್ಮೆಂಟ್ನ ಮ್ಯಾನೇಜ್ಮೆಂಟ್ ವಿರುದ್ಧ ಎಫ್ಐಆರ್ ದಾಖಲಿದ್ದು, ಅವರ ಪ್ರತಿನಿಧಿಗಳನ್ನು ಬಂಧಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.