ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ.
ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.