ಬೆಂಗಳೂರು : ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಕೆಳಗಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿ ನಗರ ಸಂಚಾರಿ ಉಳಿಸಲು ಸೂಚನೆ ನೀಡಿದ್ದಾರೆ ಅಲ್ಲದೆ ಕೆಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ಕೂಡ ನಿಷೇಧಿಸಿದ್ದಾರೆ.
26ರಂದು ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದು, 26ರಂದು ಬೆಳಗ್ಗೆ 8:30 ರಿಂದ 10:30ರ ವರೆಗೆ ಸಂಚಾರ ನಿಷೇಧಿಸಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿ ಆರ್ ವಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.
ಅದೇ ರೀತಿಯಾಗಿ ಬೆಂಗಳೂರಿನ ಹಲವಡೆ ವಾಹನ ನಿಲುಗಡೆಗೆ ನಿಷೇಧಿಸಿದ್ದಾರೆ. ಸೆಂಟ್ರಲ್ ಸ್ಟ್ರೀಟ್, ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಡಿಓ ವೃತ್ತದಿಂದ ಕೆಆರ್ ರಸ್ತೆ, ಕಬ್ಬನ್ ಜಂಕ್ಷನ್ ಎಂ.ಜಿ ರಸ್ತೆ, ಅನಿಲ್ ಕುಂಬಳೆ ವೃತ್ತದ ವರೆಗೆ ಸಂಚಾರ ನಿಷೇಧಿಸಲಾಗಿದೆ.