ನವದೆಹಲಿ : ಇಂದು ಮ್ಯಾನ್ಮಾರ್, ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಸದ್ಯ ಬ್ಯಾಂಕಾಕ್ ನಲ್ಲಿ ಸರ್ಕಾರವು ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.
.ಬ್ಯಾಂಕಾಕ್ ನಲ್ಲಿ ಭೂಕಂಪನಕ್ಕೆ ಮೊದಲ ಬಲಿಯಾಗಿರುವುದು ವರದಿಯಾಗಿದ್ದು, ಬಹುಮಹಡಿ ಕಟ್ಟಡ ಕುಸಿತ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನು ಮ್ಯಾನ್ಮರ್, ಥೈಲ್ಯಾಂಡ್ ನಲ್ಲಿ ಭೂಕಂಪನದ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ಪರಿಸ್ಥಿತಿ ಚಿಂತಿತವಾಗಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಭಾರತ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ, ನಮ್ಮ ಅಧಿಕಾರಿಗಳನ್ನು ಸನ್ನದ್ಧವಾಗಿ ಇರಿಸಿಕೊಳ್ಳಲು ಕೇಳಿಕೊಂಡಿದ್ದೇವೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿರಲು ವಿದೇಶಾಂಗ ಸಚಿವಾಲಯವನ್ನು ಕೇಳಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
PM Modi tweets, "Concerned by the situation in the wake of the earthquake in Myanmar and Thailand. Praying for the safety and well being of everyone. India stands ready to offer all possible assistance. In this regard, asked our authorities to be on standby. Also asked the MEA to… pic.twitter.com/GfrcUCMjc2
— ANI (@ANI) March 28, 2025