ಬಾಂಗ್ಲಾದೇಶ : ಕಳೆದ 5 ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕೆ ಬಂಧಿಸಲಾಗಿದ್ದ ಇಸ್ಕಾನ್ ಸಂಸ್ಥೆಯ ಮಾಜಿ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ 5 ತಿಂಗಳ ಬಳಿಕ ಜಾಮೀನು ನೀಡಿದೆ.
ಹೌದು ದೇಶದ್ರೋಹದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ ಚಿನ್ಮಯ್ ಕೃಷ್ಣದಾಸ್‌ರನ್ನು ನವೆಂಬರ್ 25, 2024ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಗಿತ್ತು.ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ 5 ತಿಂಗಳ ಬಳಿಕ ಜಾಮೀನು ನೀಡಿದೆ.
ಪ್ರಕರಣ ಹಿನ್ನೆಲೆ?
ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಚಿನ್ಮಯ್ ಕೃಷ್ಣದಾಸ್ ಅವರು ಧ್ವನಿ ಎತ್ತಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಕೆಳಗಿಳಿದ ನಂತರ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಯುತ್ತಿತ್ತು. ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಟೀಕಿಸಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು ನವೆಂಬರ್ 25, 2024ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಗಿತ್ತು. ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂ ಸಂಘಟನೆಯಾದ ಇಸ್ಕಾನ್ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ಬಾಂಗ್ಲಾದೇಶದ (Bangladesh) ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲರಾಗಿದ್ದರು. ಸನಾತನ ಜಾಗರಣ್ ಮಂಚ್, ಬಾಂಗ್ಲಾದೇಶ ಸನಾತನ ಜಾಗರಣ ಮಂಚ್ ವಕ್ತಾರರು ಮತ್ತು ಪುಂಡರೀಕ್ ಧಾಮದ ಪ್ರಾಂಶುಪಾಲರಾಗಿದ್ದರು ಎಂದು ತಿಳಿದುಬಂದಿದೆ.