ನವದೆಹಲಿ : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಇದೀಗ ಸುಪ್ರೀಂ ಕೋರ್ಟ್ ಸಹ ಈ ಒಂದು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಚಾಮುಂಡೇಶ್ವರಿ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಅಹ್ವಾನ ನೀಡಿದ್ದಾರೆ ಎಂದು ಬೆಂಗಳೂರು ನಿವಾಸಿ ಎಚ್.ಎಸ್ ಗೌರವ ಅರ್ಜಿ ಸಲ್ಲಿಸಿದ್ದರು . ವಕೀಲರು ಮೌಖಿಕವಾಗಿ ಅರ್ಜಿಯಲ್ಲಿ ಪ್ರಸ್ತಾಪಿಸಿದರು. ಈ ವೇಳೆ ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಕೋರಿದರು. ನ್ಯಾ. ವಿಕ್ರಮನಾಥ ಹಾಗು ನ್ಯಾ. ಸಂದೀಪ್ ಮೆಹ್ತ ಅವರಿದ್ದಾ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ನಮ್ಮ ದೇಶದ ಸಂವಿಧಾನ ಪ್ರಸ್ತಾವನೆ ಏನು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿತು. ಬಳಿಕ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಈ ಒಂದು ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆಗಾಗಿ ಅರ್ಜಿದಾರರ ಪರ ವಕೀಲ ಎಚ್ ಎಸ್ ಗೌರವ್ ಅವರು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಅವರ ಪೀಠದ ಮುಂದೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಈ ಒಂದು ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ ಈ ಬಾರಿ ದಸರಾ ಬಾನು ಮುಷ್ತಾಕ್ ಉದ್ಘಾಟಿಸುವುದು ಫಿಕ್ಸ್ ಆಗಿದೆ.
Supreme Court dismisses an appeal filed against the Karnataka High Court's order upholding the decision of the state government to invite Booker Prize winner Banu Mushtaq to inaugurate the state-sponsored Dasara Mahotsav at the Chamundeshwari temple, Mysuru. pic.twitter.com/MzaHm48Zjx
— ANI (@ANI) September 19, 2025