ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಿಯಾನಿಯನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಬೈಕ್ ನಲ್ಲಿ ಬುರತ್ತಿದ್ದ ಜೆಡಿಎಸ್ ಮುಖಂಡ ವೆಂಕಟೇಶ್ ನನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಜೆಡಿಎಸ್ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ, ಲಾಂಗಿನಿಂದ ಕೊಚ್ಚಿ ವೆಂಕಟೇಶ್ರನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.