ವಿಜಯಪುರ : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ ಇದೇ ವಿಚಾರವಾಗಿ ಇದೀಗ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಜಯಪುರದಲ್ಲಿ ಮೇ 11ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಪಂಚಮಸಾಲಿ ಸಮುದಾಯಕ್ಕೆ ಈ ಒಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ.
ಹೌದು ಇಂದು ವಿಜಯಪುರದ ಚೆನ್ನಮ್ಮ ಸಭಾಭವನದ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಶಾಸಕ ಯತ್ನಾಳ್ ಪರವಾಗಿ ನಿಲ್ಲೋಣವೆಂದು ಸ್ವಾಮೀಜಿ ಕರೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಸಮಾವೇಶ ನಡೆಸೋಕೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನಿರ್ಧರಿಸಿದ್ದು, ವಿರಾಟ್ ರಾಷ್ಟ್ರೀಯ ರ‍್ಯಾಲಿ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಈ ಒಂದು ಸಮಾವೇಶದಲ್ಲಿ 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮುದಾಯ ಇದೀಗ ಸಮರ ಸಾರಿದೆ. ಹಾಗಾಗಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ ಕರೆ ನೀಡಿದ್ದಾರೆ ಸಮಾವೇಶದಲ್ಲಿ 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಶಾಸಕ ಯತ್ನಾಳ ಪರವಾಗಿ ಹೋರಾಟಕ್ಕೆ ಪ್ರವಾಸ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.