ಬೆಂಗಳೂರು : ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್ ಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚು ದಾಖಲಾಗುತ್ತಿರುವ ನಡುವೆಯೇ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ ಗೂ ಡೆಂಗ್ಯೂ ಜ್ವರ ದೃಢಪಟ್ಟಿದೆ. ಹೀಗಾಗಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗಿದ್ದು, ಈವರೆಗೆ ರಾಜ್ಯದಲ್ಲಿ 5,187 ಪ್ರಕರಣಗಳು ದಾಖಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಸೇರಿದಂತೆ 3,975 ಪ್ರಕರಣಗಳು ಪತ್ತೆಯಾಗಿವೆ.