ಬೆಳಗಾವಿ : ಲಡಾಖ್‌ನಲ್ಲಿ ಭೂಕುಸಿತದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಮೃತಪಟ್ಟಿದ್ದಾರೆ. ಡಿಸೆಂಬರ್ 14 ರಂದು ಕರ್ತವ್ಯದಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮಕ್ಕೆ ತರಲಾಯಿತು.
ಹೌದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಡಿಸೆಂಬರ್ 14ರಂದು ಲಡಾಖ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ ನಿನ್ನೆ ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು.
ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿತು. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಇದೀಗ ಮನೆಯ ಮಗನ ಈ ಒಂದು ಸಾವಿನಿಂದಾಗಿ ಎರಡು ಕುಟುಂಬಗಳ ಮನೆಯಲ್ಲಿ ನೀರವ ಮೌನ ಆವರಿಸಿದೆ.