ಬೆಳಗಾವಿ : ರೈತರೊಬ್ಬರ ಹೊಲದಲ್ಲಿ ಈಜಲು ತೆರಳಿದ್ದಾಗ ವಸತಿ ನಿಲಯದ ವಿದ್ಯಾರ್ಥಿಯೊಬ್ಬ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೈಲಹೊಂಗಲ ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ರಜತ್ ಕಲ್ಲೊಳ್ಳಿ (17) ಎಂದು ತಿಳಿದುಬಂದಿದೆ. ರಜತ್ ಬೈಲಹೊಂಗಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಬರುವ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಯಾಗಿದ್ದ ಎನ್ನಲಾಗುತ್ತಿದೆ.
ಇನ್ನು ರಜತ್ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಗೆಳೆಯರ ಜೊತೆಗೆ ಹೊಂಡದಲ್ಲಿ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ತಹಶಿಲ್ದಾರ ಹನುಮಂತ ಶಿರಹಟ್ಟಿ, ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.