ಬೆಳಗಾವಿ : ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಇಬ್ಬರು ಬಿಜೆಪಿ ಸದಸ್ಯರು ಸದಸ್ಯತ್ವ ರದ್ದುಗೊಳಿಸಲಾಗಿದೆ.ಬಿಜೆಪಿ ಶಾಸಕ ಅಭಯ ಪಾಟೀಲ್ ಆಪ್ತ ಸದಸ್ಯರ ಸದಸ್ಯತ್ವ ರದ್ದು ಮಾಡಲಾಗಿದೆ. ಸದಸ್ಯತ್ವ ರದ್ದು ಮಾಡಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.
ಹೌದು ಇಬ್ಬರು ಬಿಜೆಪಿ ಸದಸ್ಯತ್ವವನ್ನು ರದ್ದು ಪಡಿಸಿದ್ದು, ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಾರ್ಡ್ ನಂಬರ್ 41 ರ ಸದಸ್ಯ ಮಂಗೇಶ್ ಪವಾರ್, ವಾರ್ಡ್ ನಂಬರ್ 23ರ ಸದಸ್ಯ ಜಯಂತ್ ಜಾಧವ ಸದಸ್ಯತ್ವ ರದ್ದಾಗಿದೆ. ಲೋಕೋಪಯೋಗಿ ಇಲಾಖೆಯ ತಿನಿಸುಕಟ್ಟೆಯಲ್ಲಿ ಪತ್ನಿಯರ ಹೆಸರಿನಲ್ಲಿ ಬಿಜೆಪಿ ಸದಸ್ಯರು ಮಳಿಗೆ ಪಡೆದಿದ್ದರು. ಪತ್ನಿ ನೀತಾ ಹೆಸರಿನಲ್ಲಿ ಮಂಗೇಶ್ ಪವಾರ, ಪತ್ನಿ ಸೋನಾಲಿ ಹೆಸರಿನಲ್ಲಿ ಜಯಂತ್ ಜಾಧವ ಮಳಿಗೆ ಪಡೆದಿದ್ದರು.
ತಮ್ಮ ಪ್ರಭಾವ ಬೀರಿ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆಂದು ಸುಜೀತ್ ಮುಳಗುಂದ ದೂರು ನೀಡಿದ್ದರು. ಈ ದೂರು ಆಧರಿಸಿ ಸುದೀರ್ಘ ವಿಚಾರಣೆ ನಡೆಸಿ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು ಪಡೆಸಲಾಗಿದೆ. ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಆಂತರಿಕ ಕಲಹ ಬೀದಿಗೆ ಬಂದಿದ್ದು ಒಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣ ಇನ್ನೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಬಣ ಬಡಿದಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಹೈಕಮಾಂಡ್ ಯತ್ನಾಳ್ ಗೆ 72 ಗಂಟೆಯಲ್ಲಿ ಉತ್ತರಿಸುವಂತೆ ಶಿಸ್ತು ಸಮಿತಿ ಶೋಕಾಸ್ ನೊಟ್ಟಿಸ್ ನೀಡಿದೆ.