ಬೆಳಗಾವಿ : ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದನ್ನು ನೋಡಿದ ಮಹಿಳೆಯನ್ನೇ ಕಳ್ಳರು ಬಾವಿಗೆ ನೂಕಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳಿ ಗ್ರಾಮದಲ್ಲಿ ನಡೆದಿದೆ.
ಶಿಂದೊಳಿ ಗ್ರಾಮದ ಭಾರತಿ ಪೂಜಾರಿ (48) ಮೃತ ಮಹಿಳೆ ಎಂದು ತಿಳಿದುಬಂದಿದೆ. ಬೆಳ್ಳಂಬೆಳಗ್ಗೆ ಶಿಂದೊಳಿ ಗ್ರಾಮದ ಮಸಣವ್ವ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ್ದಾರೆ. ಇದನ್ನು ನೋಡಿದ ಮಹಿಳೆ ಗ್ರಾಮಸ್ಥರಿಗೆ ತಿಳಿಸಿ, ನಮ್ಮ ಕೃತ್ಯ ಬೆಳಕಿಗೆ ಬರುತ್ತದೆ ಎಂದು ಮಹಿಳೆಯನ್ನೇ ಹತ್ಯೆ ಮಾಡಿ ಬಳಿಕ ದೇಗುಲದಲ್ಲಿನ ಬೆಳ್ಳಿ ಆಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ ತನ್ನ ಮನೆಯ ದನಕರುಗಳ ಸಗಣಿ ಎತ್ತಿ ತಿಪ್ಪೆಗೆ ಎಸೆಯಲು ಇವರು ಬಂದಿದ್ದರು. ಆಗ ಮನೆ ಪಕ್ಕದಲ್ಲಿದ್ದ ಮಸಣವ್ವ ದೇಗುಲದಲ್ಲಿನ ಆಭರಣಗಳನ್ನು ಕಳ್ಳರು ಕದಿಯಲು ಮುಂದಾಗಿದ್ದರು. ಸಗಣಿ ಎಸೆದು ಮನೆಗೆ ಬರುವಾಗ ದೇಗುಲದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಭಾರತಿ ನೋಡಿದ್ದಾರೆ. ಆಗ ಭಾರತಿಯನ್ನು ಹೊತ್ತೊಯ್ದು ದೇಗಲದ ಹಿಂದಿದ್ದ ಬಾವಿಗೆ ಕಳ್ಳರು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.ಘಟನೆ ಕುರಿತು ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.