ಬೆಂಗಳೂರು : ಬೇಲೆಕೆರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನವಾಗಿದೆ. ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತಂತೆ ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣದ ಕುರಿತು ನಾಳೆ ಆದೇಶ ಪ್ರಕಟಿಸಲಿದೆ.
ಹೌದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಶಿಕ್ಷ ಪ್ರಮಾಣದ ಬಗ್ಗೆ ನಾಳೆ ಆದೇಶ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತು ಎರಡು ಕಡೆಗೂ ವಾದ ಮಂಡನೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಣೆಯ ಕುರಿತಂತೆ ಕೋರ್ಟ್ ನಾಳೆ ಆದೇಶ ಪ್ರಕಟಿಸಲಿದೆ.
ಏನಿದು ಪ್ರಕರಣ?
ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 200 ಕೋಟಿ ರೂ.ಗ ಳಿಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿ ರ ನ್ನು ಬೇಲೆಕೇರಿ ಬಂದರಿನ ಅಧಿ ಕಾ ರಿ ಮಹೇಶ್ ಬಿಳಿಯ ಅವರ ಸುಪ ರ್ದಿ ಗೆ ನೀಡಿದ್ದರು.
ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಈ ಅದಿರು ಕಳವು ಮಾಡಲು ಒಳ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪೈಕಿ ಕೆಲವರು ಜಪ್ತಿ ಮಾಡಿದ ಅದಿರನ್ನು ಸತೀಶ್ ಸೈಲ್‌ಗೆ ಕಡಿಮೆ ಮೊತ್ತಕ್ಕೆ ಅಕ್ರಮವಾಗಿ ಮಾರಾಟ ಮಾಡಿದ್ದರು. ಇನ್ನು ಕೆಲವರು ನೇರವಾಗಿ ವಿದೇಶಕ್ಕೆ ರಫ್ತು ಮಾಡಿದ್ದರು. ಸತೀಶ್ ಸೈಲ್ ಪ್ರತ್ಯೇಕವಾಗಿ ತಮ್ಮ ಪಿಜಿಎಸ್ ಕಂಪೆನಿ, ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ.ಲಿ. ಹಾಗೂ ಇತರ ಕಂಪೆನಿಗಳ ಮೂಲಕ ಅದಿರನ್ನು ವಿದೇಶಕ್ಕೆ ರಫ್ತು ಮಾಡಿದ್ದರು ಎನ್ನಲಾಗಿದೆ.