ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆಯಾಗಿದೆ.
ಬೆಂಗಳೂರಿನ ಪೂರ್ಣ ಪ್ರಜ್ಞಾಲೇಔಟ್ ಹೋಟೆಲ್ ಓಯೋ ರೂಮ್ ನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯ ಹತ್ಯೆ ಮಾಡಿದ್ದಾನೆ.
ಚಾಕುವಿನಿಂದ ಇರಿದು ಹರಿಣಿ (36)ಯನ್ನು ಪ್ರಿಯಕರ್ ಯಶಸ್ ಹತ್ಯೆ ಮಾಡಿದ್ದಾನೆ. ಅನೈತಿಕ ಸಂಬಂಧ ಹಿನ್ನೆಲೆ ಪ್ರಿಯತಮೆ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಜೂನ್ 6 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.