ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಅನೇಕ ದುರಂತಗಳು ಸಂಭವಿಸುತ್ತವೆ. ಆದರೂ ಅಧಿಕಾರಿಗಳು ಇದು ಯಾವುದಕ್ಕೂ ಕೂಡ ತಲೆಕೆಡಿಸಿಕೊಳ್ಳುವುದಿಲ್ಲ ಇದೀಗ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ.
ಹೌದು ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದೆ. ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಇದೀಗ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸದ್ಯ ಕಠಿಣ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.