ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಲಾರಿ, ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರವಾದಂತಹ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಒಂದು ಸಣ್ಣ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಗುಂಡೇನಹಳ್ಳಿಯ ಬಳಿ ಸರಣಿ ಅಪಘಾತ ಸಂಭವಿಸಿದೆ. ಕಾರು ಲಾರಿ ಹಾಗೂ ಖಾಸಗಿ ಬಸ್ ನಡುವೆ ಈ ಒಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ.
ಕಾರು ಲಾರಿಗೆ ಡಿಕ್ಕಿ ಹೊಡೆದ ಬಳಿಕ ಅದೇ ವೇಗದಲ್ಲಿ ಬಂದಂತಹ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಆದರೆ ಲಾರಿ ಚಾಲಕನಿಗೆ ಈ ಒಂದು ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು ಬಿಟ್ಟರೆ, ಯಾವುದೇ ರೀತಿಯಾದಂತಹ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಕುರಿತಂತೆ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.